ಮೈಸೂರಿನ ಊಟಿ ರಸ್ತೆ ಯಲ್ಲಿರುವ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಕಿರಿಯ ಪೀಠಾಧಿಪತಿಗಳಾದ ಶ್ರೀ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮಿಗಳ 23ನೇ ಚಾತುರ್ಮಾಸ್ಯ ವೈಭವವಾಗಿ ನೆರವೇರುತ್ತಿದ್ದು ಮೊದಲಿಗೆ ಗೋಪೂಜೆಯನ್ನು ಶ್ರೀಗಳು ನೆರವೇರಿಸಿದರು.

ತರುವಾಯ ವಿಶ್ವ ಪ್ರಾರ್ಥನಾ ಮಂದಿರದಲ್ಲಿ ಶ್ರೀ ಚಕ್ರ ಪೂಜೆಯನ್ನು ಪರಮ ಪೂಜ್ಯರು ನೆರವೇರಿಸಿದರು. ಸಂಜೆ,ಕರ್ನಾಟಕ ರಾಜ್ಯದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಶ್ರೀ ರಿಜ್ವಾನ್ ಅವರು ಆಶ್ರಮಕ್ಕೆ ಭೇಟಿ ನೀಡಿ ಶ್ರೀ ಸ್ವಾಮೀಜಿಯವರ ದರ್ಶನ ಪಡೆದರು.










